
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ 14 ಪಂದ್ಯಗಳು ಮುಗಿದಿವೆ. ಈಗಾಗಲೇ ಎಲ್ಲಾ ತಂಡಗಳು 2 ಪಂದ್ಯಗಳನ್ನಾಡಿದ್ದು, ಈ ಮ್ಯಾಚ್ಗಳಲ್ಲಿ ಗೆಲುವಿನ ರುಚಿ ಮಾತ್ರ ನೋಡಿರುವುದು ಕೇವಲ 2 ತಂಡಗಳು ಮಾತ್ರ, ಇನ್ನುಳಿದ ಎಲ್ಲಾ ತಂಡಗಳು ಒಂದು ಪಂದ್ಯದಲ್ಲಿ ಮುಗ್ಗರಿಸಿದೆ.

ಅದರಲ್ಲೂ ಕಳೆದ ಎರಡು ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಐಪಿಎಲ್ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಿದೆ. ಅದರಂತೆ ನೂತನ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡುವುದಾದರೆ…

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಆಡಿದ 2 ಮ್ಯಾಚ್ಗಳಲ್ಲೂ ಗೆಲುವು ದಾಖಲಿಸಿದೆ. ಈ ಮೂಲಕ 1.485 ನೆಟ್ ರನ್ ರೇಟ್ನೊಂದಿಗೆ 4 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ ಮೊದಲೆರಡು ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಈ ಪ್ರದರ್ಶನದೊಂದಿಗೆ ಡಿಸಿ ಪಡೆ 1.320 ನೆಟ್ ರನ್ ರೇಟ್ನೊಂದಿಗೆ ಒಟ್ಟು 4 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಅಲಂಕರಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ ತಂಡವು ಮೊದಲ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದರೂ, ಮೂರನೇ ಪಂದ್ಯದಲ್ಲಿ ಸೋಲನುಭವಿಸಿದೆ. ಈ ಮೂಲಕ 1.149 ನೆಟ್ ರನ್ ರೇಟ್ನೊಂದಿಗೆ ಒಟ್ಟು 4 ಅಂಕಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದೆ.

ಗುಜರಾತ್ ಟೈಟಾನ್ಸ್: ಶುಭ್ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು ಈವರೆಗೆ ಮೂರು ಪಂದ್ಯಗಳನ್ನಾಡಿದ್ದು, ಈ ವೇಳೆ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ 0.807 ನೆಟ್ ರನ್ ರೇಟ್ನೊಂದಿಗೆ ಒಟ್ಟು 4 ಅಂಕಗಳನ್ನು ಪಡೆದು ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡವು ಆಡಿದ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದ್ದು ಕೇವಲ 1 ಪಂದ್ಯದಲ್ಲಿ ಮಾತ್ರ. ಇದಾಗ್ಯೂ 0.309 ನೆಟ್ ರನ್ ರೇಟ್ ಹೊಂದಿರುವ ಮುಂಬೈ ಇಂಡಿಯನ್ಸ್ ಅಂಕ ಪಟ್ಟಿಯಲ್ಲಿ 5ನೇ ಸ್ಥಾನವನ್ನು ಅಲಂಕರಿಸುವಲ್ಲಿ ಯಶಸ್ವಿಯಾಗಿದೆ.

ಇನ್ನುಳಿದಂತೆ ಲಕ್ನೋ ಸೂಪರ್ ಜೈಂಟ್ಸ್ (2 ಅಂಕಗಳು), ಚೆನ್ನೈ ಸೂಪರ್ ಕಿಂಗ್ಸ್ (2 ಅಂಕಗಳು), ಸನ್ರೈಸರ್ಸ್ ಹೈದರಾಬಾದ್ (2 ಅಂಕಗಳು), ರಾಜಸ್ಥಾನ್ ರಾಯಲ್ಸ್ (2 ಅಂಕಗಳು) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮೂರು ಪಂದ್ಯಗಳಲ್ಲಿ ಒಂದು ಜಯ ಮಾತ್ರ ಸಾಧಿಸಿ ಕ್ರಮವಾಗಿ 6 ರಿಂದ 10ನೇ ಸ್ಥಾನಗಳನ್ನು ಅಲಂಕರಿಸಿದೆ.
ಪ್ರಕಟಿಸಲಾಗಿದೆ – 9:54 ಎಎಮ್, ಥು, 3 ಏಪ್ರಿಲ್ 25
[