
ಐಪಿಎಲ್ನ 9ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ. ಏಕೆಂದರೆ ಈ ಪಂದ್ಯದಲ್ಲಿ 4 ಓವರ್ಗಳನ್ನು ಎಸೆದ ಪ್ರಸಿದ್ಧ್ ಕೇವಲ 18 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು. ಈ ಕರಾರುವಾಕ್ ಬೌಲಿಂಗ್ ಪರಿಣಾಮ ಮುಂಬೈ ಇಂಡಿಯನ್ಸ್ ತಂಡವು ರನ್ಗಳಿಸಲು ಪರದಾಡಿದರು.
ಇತ್ತ ಪ್ರಸಿದ್ಧ್ ಕೃಷ್ಣಗೂ ಮುನ್ನ ಪವರ್ಪ್ಲೇನಲ್ಲಿ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್ 4 ಓವರ್ಗಳಲ್ಲಿ 2 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಇನ್ನು ಅತ್ಯುತ್ತಮ ದಾಳಿ ಸಂಘಟಿಸಿದ ಪ್ರಸಿದ್ಧ್ ಕೃಷ್ಣ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಒಲಿಯಿತು.
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್ಗಳಲ್ಲಿ 196 ರನ್ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ 160 ರನ್ಗಳಿಸಲಷ್ಟೇ ಶಕ್ತರಾದರು. ಈ ಚೇಸಿಂಗ್ ವೇಳೆ ಹಾರ್ದಿಕ್ ಪಾಂಡ್ಯ ಹಾಗೂ ಸಾಯಿ ಕಿಶೋರ್ ನಡುವೆ ಸಣ್ಣ ಕಿರಿಕ್ ಕೂಡ ನಡೆದಿದೆ.
[