ಐಪಿಎಲ್ 2025 ರ ಏಳನೇ ಪಂದ್ಯವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯಾವಳಿಯಲ್ಲಿ ಈ ಮೈದಾನ ಬ್ಯಾಟ್ಸ್‌ಮನ್‌ಗಳಿಗೆ ಸ್ವರ್ಗವೆಂದು ಸಾಬೀತಾಗಿದೆ. ಕಳೆದ ಆವೃತ್ತಿಯಲ್ಲಿ, ಹೈದರಾಬಾದ್ ತಂಡವು ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಅನೇಕ ಬಾರಿ ದೊಡ್ಡ ಸ್ಕೋರ್‌ಗಳನ್ನು ಗಳಿಸಿತ್ತು. ಈ ಬಾರಿಯೂ ಸಹ ಅವರು ಅದೇ ರೀತಿಯ ಆರಂಭವನ್ನು ಮಾಡಿದ್ದಾರೆ. ಇಲ್ಲಿ ನಡೆದ ಮೊದಲ ಪಂದ್ಯದಲ್ಲಿ ಎಸ್‌ಆರ್‌ಹೆಚ್ ಬ್ಯಾಟ್ಸ್‌ಮನ್‌ಗಳು 286 ರನ್ ಗಳಿಸಿದ್ದರು ಮತ್ತು ಗೆಲುವಿನೊಂದಿಗೆ ಆರಂಭಿಸಿದ್ದರು. ಹೀಗಾಗಿ ಲಕ್ನೋ ಸೂಪರ್ಜೈಂಟ್ಸ್ ತಂಡಕ್ಕೆ ಈ ಪಂದ್ಯ ಕಠಿಣ ಸವಾಲಾಗಿ ಪರಿಣಮಿಸಿದೆ. ಇತ್ತ ಲಕ್ನೋ ಕೂಡ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಕಾರಣ ಈ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.
[